There is a relation between the cultural history of man and the origin of folk arts. Folk is the formulation of people’s lifestyle.” – Prof. Bandu Suresh Kempavade at a seminar on ‘Indian Folk Culture: A Glance’  organized at Mahaveera College Moodabidri

‘ಮನುಷ್ಯನ ಸಾಂಸ್ಕೃತಿಕ ಚರಿತ್ರೆಗೂ ಜನಪದ ಕಲೆಗಳ ಉಗಮಕ್ಕೂ ಅವಿನಾಭಾವ ಸಂಬಂಧವಿದೆ. ಜನರ ಜೀವನ ಪದ್ಧತಿಯನ್ನು ರೂಪಿಸುವಂತದ್ದೇ ಜಾನಪದ. ಕರ್ನಾಟಕದ ಜನಪದ ಕಲೆಗಳು ಹೆಚ್ಚು ವೈವಿಧ್ಯಮಯವಾಗಿವೆ. ಇದಕ್ಕೆ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಮತ್ತು ಭೌಗೋಳಿಕ ಹಿನ್ನೆಲೆ ಕಾರಣವಾಗಿದೆ. ಕರಾವಳಿ ಭಾಗದ ಯಕ್ಷಗಾನ ಕೂಡಾ ಅತ್ಯಂತ ಜನಪ್ರಿಯ ಜನಪದ ಕಲೆಯೆನಿಸಿಕೊಂಡಿವೆ. ಭಾರತೀಯ ಸಂಸ್ಕೃತಿಯ ಬಗ್ಗೆ ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು, ಪರಂಪರೆಯಿಂದ ನಡೆದುಕೊಂಡು ಬಂದ ಜನಪದವನ್ನು ಉಳಿಸುವ ಕೆಲಸವನ್ನು ಇಂದಿನ ವಿದ್ಯಾರ್ಥಿಗಳು ಮಾಡಬೇಕಾದ ಅಗತ್ಯವಿದೆ’ ಎಂದು ಮಹಾವೀರ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಪ್ರಸ್ತುತ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಶಿಗ್ಗಾಂನ ಸಹಪ್ರಾಧ್ಯಾಪಕ ಪ್ರೊ. ಬಂಡು ಸುರೇಶ್ ಕೆಂಪವಾಡೆ ತಿಳಿಸಿದರು. ಅವರು ಶ್ರೀ ಮಹಾವೀರ ಕಾಲೇಜು ಹಾಗೂ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ‘ಭಾರತದ ಜಾನಪದ ಸಂಸ್ಕೃತಿ: ಒಂದು ಕಿರುನೋಟ’ ಎಂಬ ವಿಷಯದಲ್ಲಿ ಹಮ್ಮಿಕೊಳ್ಳಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಮಹಾವೀರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಚಂದ್ರಶೇಖರ ದೀಕ್ಷಿತ್ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಹರೀಶ್ ವಂದಿಸಿದರು. ಕನ್ನಡ ಉಪನ್ಯಾಸಕಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.