June 21, 2017: On part of the International Yoga Day, 15 days’ Yoga Camp was organized at Shri Mahaveera College, Moodabidri in association with College’s NCC Wing and Pathanjali Yoga Samithi, Moodabidri Zone. The camp was inaugurated by Prof. Chandrashekhar Deekshith, Principal of Mahaveera First Grade College, Moodabidri.
—
ಶ್ರೀ ಮಹಾವೀರ ಕಾಲೇಜಿನ ಎನ್.ಸಿ.ಸಿ. ಘಟಕ ಹಾಗೂ ಮೂಡುಬಿದಿರೆ ವಲಯದ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಆಯೋಜಿಸಲಾದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹದಿನೈದು ದಿನಗಳ ಯೋಗ ಶಿಬಿರದ ಉದ್ಘಾಟನೆಯನ್ನು ಮಹಾವೀರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಚಂದ್ರಶೇಖರ್ ದೀಕ್ಷಿತ್ ದೀಪ ಬೆಳಗಿಸಿ ಉದ್ಘಾಟಿಸಿದರು. ‘ಯೋಗಾಭ್ಯಾಸ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಮತ್ತು ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳಬಹುದು. ಅದಕ್ಕಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಮಾಡಿ, ಉತ್ತಮ ಆರೋಗ್ಯ ಹಾಗೂ ಯಶಸ್ಸನ್ನು ಗಳಿಸಿಕೊಳ್ಳಿ’ ಎಂದು ಅವರು ಹೇಳಿದರು.
ಯೋಗಾಭ್ಯಾಸದ ಪ್ರಾತ್ಯಕ್ಷಿಕೆಯನ್ನು ಪತಂಜಲಿ ಯೋಗ ಸಮಿತಿಯ ಜಿಲ್ಲಾ ಮುಖ್ಯಸ್ಥ ಮುಲ್ಕಿಯ ರಾಘವೇಂದ್ರ ರಾವ್ ಹಾಗೂ ಮೂಡುಬಿದಿರೆಯ ಪ್ರಕಾಶ್ ಅಮೀನ್ ನಡೆಸಿಕೊಟ್ಟರು. ವೇದಿಕೆಯಲ್ಲಿ ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಮೂಡುಬಿದಿರೆ ವಲಯದ ಪತಂಜಲಿ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಯತಿರಾಜ್ ಜೈನ್, ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ಅಜಯ್ ಅಮೀನ್ ಮತ್ತು ರಂಜಿನಿ ರಾವ್ ಉಪಸ್ಥಿತರಿದ್ದರು. ಕಾಲೇಜಿನ ಎನ್.ಸಿ.ಸಿ. ಅಧಿಕಾರಿ ಮೇಜರ್ ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
Recent Comments